12000 Teacher Job Vacancies :ರಾಜ್ಯ ಸಭಾ ಸದಸ್ಯ, ಸಚಿವ ಜಯಂತ್ ಚೌಧರಿ ಅವರು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ, ದೇಶದಾದ್ಯಂತ ಇರುವಂತಹ ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ವಿದ್ಯಾಲಯಗಳಲ್ಲಿ 12,000 ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದೆಂದು ತಿಳಿಸಿದ್ದಾರೆ.
ಅವರು ನೀಡಿರುವ ಮಾಹಿತಿಯ ಪ್ರಕಾರ, ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ 7,765 ಶಿಕ್ಷಕರ ಹುದ್ದೆಗಳು ಮತ್ತು ನವೋದಯ ವಿದ್ಯಾಲಯ ಸಮಿತಿಯಲ್ಲಿ 4,323 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ. ಈ ಶಿಕ್ಷಕರ ಹುದ್ದೆಗಳು ಖಾಲಿಯಾಗಲು ಹಲವು ಕಾರಣಗಳಿವೆ.
ಪ್ರಮುಖವಾಗಿ ಹೊಸ ಶಾಲೆಗಳ ಸ್ಥಾಪನೆ, ಶಿಕ್ಷಕರ ನಿವೃತ್ತಿ, ರಾಜೀನಾಮೆ, ಬಡ್ತಿ, ವರ್ಗಾವಣೆ ಇತ್ಯಾದಿ ಕಾರಣಗಳಿಂದ ಹುದ್ದೆಗಳು ತೆರವಾಗುತ್ತವೆ. ಈಗ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಇರುವಂತಹ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಯಂತ್ ಚೌಧರಿ ಅವರು ತಿಳಿಸಿದ್ದಾರೆ.
ಸಚಿವ ಜಯಂತ್ ಚೌಧರಿ ಅವರು ನೀಡಿರುವ ಹೇಳಿಕೆಯ ಪ್ರಕಾರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಯಲ್ಲಿನ ಗ್ರೂಪ್-ಎ ವಿಭಾಗದ 143 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. ಇದಲ್ಲದೇ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (NCTE)ವಯಲ್ಲಿ ಪ್ರಸ್ತುತ 60 ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ.

ಜಯಂತ್ ಚೌಧರಿ ಅವರು, ದೇಶದಾದ್ಯಂತ ಇರುವ ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ವಿದ್ಯಾಲಯಗಳಲ್ಲಿನ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿವೆ ಮತ್ತು ಶೀಘ್ರದಲ್ಲೇ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.